ಒಬ್ಬ ಜವಾಬ್ದಾರಿಯುತ ತಂದೆಯಾಗಿ ನಾನು ನನ್ನ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ-ಶಾಸಕ ಪ್ರೀತಂ ಗೌಡ ಹಾಸನ,ಅಕ್ಟೋಬರ್,8,2020(..):ರಾಜ್ಯದಲ್ಲಿ ಕೊರೋನಾ ಹರಡುವಿಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಶಾಲಾಕಾಲೇಜುಗಳ ಆರಂಭದ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. ಸರ್ಕಾರ ಶಾಲೆಗಳ ಆರಂಭದ ಬಗ್ಗೆ ತಜ್ಞರ ಜತೆ ಸಭೆ ನಡೆಸುತ್ತಿದ್ದು, ಈ ಮಧ್ಯೆ ಶಾಲೆ ಆರಂಭವಾದರೇ ತನ್ನ ಮಕ್ಕಳನ್ನ ಶಾಲೆಗೆ ಕಳುಹಿಸದಿರಲು ಬಿಜೆಪಿ ಶಾಸಕ ಪ್ರೀತಂ ಗೌಡ ನಿರ್ಧರಿಸಿದ್ದಾರೆ. ಹೌದು, ಸರ್ಕಾರ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಪ್ರೀತಂ ಗೌಡ, ನನಗೂ ಎರಡು ಮಕ್ಕಳಿದ್ದಾರೆ. ನಾನು ಪೋಷಕನಾಗಿ ಇಬ್ಬರು ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ. ಶಾಸಕನಾಗಿ ನಾನು ಸರ್ಕಾರದ ಮಾತನ್ನ ಕೇಳಿಸಿಕೊಳ್ಳುತ್ತೇನೆ. ಒಬ್ಬ ಜವಾಬ್ದಾರಿಯುತ ತಂದೆಯಾಗಿ ನಾನು ನನ್ನ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದಿದ್ದಾರೆ. ಹಾಗೆಯೇ ಒಬ್ಬ ಶಾಸಕನಾಗಿ ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಪ್ರೀತಂಗೌಡ ತಿಳಿಸಿದ್ದಾರೆ. : -19- - – – –-