ಕೊರೊನಾ ಆತಂಕ: ಶಾಲೆ ಆರಂಭಿಸುವುದು ಸೂಕ್ತವಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು,ಅಕ್ಟೊಬರ್,08,2020(..):ಕೊರೊನಾ ಆತಂಕದ ನಡುವೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶಾಲೆ,ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು, ಕೊರೊನಾ ಕುರಿತಂತೆ ಪೋಷಕರಲ್ಲಿ ಆತಂಕವಿದೆ. ಮಕ್ಕಳ ಜೀವನದ ಜೊತೆ ಚೆಲ್ಲಾಟ ಬೇಡ. ಸರಕಾರ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಬೇಕು ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಶಾಲಾ-ಕಾಲೇಜುಗಳ ಆರಂಭ ಬೇಡ. ಸೂಕ್ತ ಸಿದ್ಧತೆ ಇಲ್ಲದೇ ಶಾಲಾಕಾಲೇಜು ಆರಂಭಿಸಬೇಡಿ ಎಂದು ಹೆಚ್.ಡಿಕೆ ಸಲಹೆ ನೀಡಿದರು. : ------ ..