ಡ್ರಗ್ಸ್ ಜಾಲದಲ್ಲಿ ನಂಟು ಆರೋಪ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಕೋರ್ಟ್…. ಮುಂಬೈ,ಅಕ್ಟೋಬರ್,7,2020(..):ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹಾಗೂ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಬಂಧಿತರಾಗಿರುವ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 28 ದಿನಗಳ ಬಳಿಕ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 1ಲಕ್ಷ ಮೌಲ್ಯದ ಬಾಂಡ್ ನೀಡುವಂತೆ ಸೂಚಿಸಿರುವ ಕೋರ್ಟ್, ಬಾಂಬೆ ಬಿಟ್ಟು ಹೊರ ಹೋಗದಂತೆ ತಿಳಿಸಿದೆ. ಹಾಗೆಯೇ ಪಾಸ್ ಪೋರ್ಟ್ ವಶಕ್ಕೆ ಪಡೆಯುವಂತೆ ಸೂಚನೆ ನೀಡಿದೆ. ನಟ ಸುಶಾಂತ್ ಸಿಂಗ್ ಸಾವು ಹಾಗೂ ಡ್ರಗ್ಸ್ ಜಾಲದ ನಂಟಿನ ಆರೋಪದಲ್ಲಿ ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಕಳೆದ 28 ದಿನಗಳಿಂದ ಬಂಧನದಲ್ಲಿದ್ದರು. ಈ ನಡುವೆ ಇಬ್ಬರು ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ ಬಾಂಬೆ ಹೈಕೋರ್ಟ್ ಶೋವಿಕ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. : - – -