ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ವೈ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ…. ಬೆಳಗಾವಿ,ಅಕ್ಟೋಬರ್,7,2020(..): ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ನಿಧನರಾದ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬೆಳಗಾವಿಯ ಸದಾಶಿವನಗರದಲ್ಲಿರುವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿದರು. ದಿ. ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳ ಪುತ್ರಿಯರಾದ ಶ್ರದ್ಧಾ ಶೆಟ್ಟರ್, ಸ್ಪೂರ್ತಿ ಅವರಿಗೆ ಸಾಂತ್ವಾನ ಹೇಳಿದರು. ಈ ವೇಳೆ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉಪಸ್ಥಿತರಿದ್ದರು. : - - - -