ಡಿಕೆಶಿ ನಿವಾಸಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ಬೆಂಗಳೂರು,ಅಕ್ಟೊಂಬರ್,07,2020(..) :ಶಾಸಕ ಜಿ.ಟಿ.ದೇವೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕುತೂಹಲ ಮೂಡಿಸಿದೆ.ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ ಜಿ.ಟಿ.ದೇವೇಗೌಡ ಡಿಕೆಶಿ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಜಿ.ಟಿ. ದೇವೇಗೌಡ ಜೆಡಿಎಸ್ ನಿಂದ ದೂರ ಉಳಿದಿದ್ದು, ಬಿಜೆಪಿ ನಾಯಕರ ಜೊತೆಗೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲ ಕಾರಣವಾಗಿದೆ. : -..--..-