ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಅರೆಸ್ಟ್… ತುಮಕೂರು,ಅಕ್ಟೋಬರ್,7,2020(..):ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿಅಗ್ರಹಾರ ನಿವಾಸಿ ಹನುಮಂತರಾಯಪ್ಪ ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು 9 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಹನುಮಂತರಾಯಪ್ಪ ಹೂವಿನ ಗಿಡದ ಮಧ್ಯೆ ಗಾಂಜಾ ಬೆಳೆದಿದ್ದನು. ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - –