ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಕೇಸ್: ಆರೋಪಿಗಳು ಸಲ್ಲಿಸಿದ್ಧ ಜಾಮೀನು ಅರ್ಜಿ ವಜಾ… ಬೆಂಗಳೂರು,ಅಕ್ಟೋಬರ್,5,2020(..): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಪ್ರಶಾಂತ್ ರಾಂಕ, ನಿಯಾಜ್, ವೈಭವ್ ಜೈನ್ ಹಾಗೂ ಪ್ರಕರಣದಲ್ಲಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿರುವ ಅಭಿಸ್ವಾಮಿ, ಪ್ರಶಾಂತ್ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಎನ್ ಡಿ ಪಿ ಎಸ್ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೆಯೂ ಆರೋಪಿಗಳಿಗೆ ಜೈಲೇ ಗತಿಯಾಗಿದೆ. ಪ್ರಕರಣ ಸಂಬಂಧ ನಟಿ ರಾಗಿಣಿ ಮತ್ತು ನಟಿ ಸಂಜನಾ ಸೇರಿ ಆರೋಪಿಗಳ ಜಾಮೀನು ಅರ್ಜಿಯನ್ನೂ ವಜಾಗೊಳಿಸಲಾಗಿತ್ತು. : - - - – – .