ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ : ಕೊರೊನಾ ಟೆಸ್ಟ್ ಕೇಂದ್ರ ಮತ್ತಷ್ಟು ಆರಂಭ ಮೈಸೂರು,ಅಕ್ಟೊಂಬರ್,04,2020(..) : ಮೈಸೂರಿನಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆ ಮಹಾನಗರ ಪಾಲಿಕೆಯು ಕೊರೊನಾ‌ ಟೆಸ್ಟ್ ಕೇಂದ್ರಗಳನ್ನು ಮತ್ತಷ್ಟು ಹೆಚ್ಚಿಸಿದೆ. ಮೈಸೂರಿನಲ್ಲಿ ಕೊರೊನಾ ಸೋಂಕು ದಿನ ಕಳೆದಂತೆ ಹೆಚ್ಚುತ್ತಿರುವ ಪರಿಣಾಮ ಕೊರೊನಾ ಹರಡುವಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೊರೊನಾ ಪರೀಕ್ಷಾ ಕೇಂದ್ರಗಳನ್ನು ತೆರೆದಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮತ್ತೆ 22 ಕೇಂದ್ರಗಳಲ್ಲಿ ಕೊರೊ‌ನಾ ಟೆಸ್ಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಟೆಸ್ಟ್ ಹೆಚ್ಚಿಸುವ ಮೂಲಕ ಏರುಗತಿಯಲ್ಲಿ ಸಾಗಿರುವ ಕೊರೊನಾ ವೈರಸ್ ಗೆ ಕಡಿವಾಣ ಹಾಕಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದ್ದಾರೆ. :------