ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು : ಠಾಣೆ ಮೆಟ್ಟಿಲೇರಿದ ದಂಪತಿ ಬೆಳಗಾವಿ,ಅಕ್ಟೊಂಬರ್,03,2020(..): ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕೆ.ಕಲ್ಯಾಣ್ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ. ಬೆಳಗಾವಿಯ ಮಾಳಮಾರುತಿ ಠಾಣೆಗೆ ಕೆ.ಕಲ್ಯಾಣ್ ಅವರು ಪತ್ನಿ ಅಶ್ವಿನಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಅಶ್ವಿನಿ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಹೀಗಾಗಿ, ದಾಂಪತ್ಯದಲ್ಲಿ ಬಿರುಕು ಮೂಡಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. : ------ -