ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ… ಕಲ್ಬರ್ಗಿ,ಅಕ್ಟೋಬರ್,3,2020(..):ಮನೆಮುಂದೆ ಮಲಗಿದ್ಧ ದಂಪತಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಮಲಾಪುರ ತಾಲ್ಲೂಕಿನ ದಿನಸಿ ಕೆ.ತಾಂಡಾದಲ್ಲಿ ಈ ಘಟನೆ ನಡೆದಿದೆ. ಪತಿ ಮಾರುತಿ ಮತ್ತು ಪತ್ನಿ ಶಾರದಾ ಹತ್ಯೆಗೀಡಾದವರು. ದಂಪತಿ ಮನೆ ಮುಂದೆ ಮಲಗಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - --