ಡಿ.ಕೆ ರವಿ ಪತ್ನಿಗೆ ಟಿಕೆಟ್ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ… ಬೆಳಗಾವಿ,ಅಕ್ಟೋಬರ್, 3,2020(..):ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣಾ ಕಣ ರಂಗೇರುತ್ತಿದ್ದು ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಡಿ.ಕೆ ರವಿ ಅವರ ಪತ್ನಿ ಕುಸುಮಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರ ಸದ್ಧು ಮಾಡುತ್ತಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ 7 ರಿಂದ 8 ಆಕಾಂಕ್ಷಿಗಳಿದ್ದಾರೆ. ಈ ನಡುವೆ ಕುಸುಮಾ ಅವರ ಹೆಸರನ್ನೂ ಶಿಫಾರಸ್ಸು ಮಾಡುತ್ತಿದ್ದಾರೆ. ಕೆಲವರು ಹಿರಿಯರಿಗೆ ಟಿಕೆಟ್ ನೀಡಿ ಎನ್ನುತ್ತಿದ್ದಾರೆ. ಆದರೆ ಈ ಬಗ್ಗೆ ನಾನು ಇನ್ನು ಚರ್ಚೆ ಮಾಡಿಲ್ಲ ಎಂದರು. ಆರ್ ಆರ್ ನಗರ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಸಮಿತಿಲ್ಲಿ ಎಲ್ಲಾ ರೀತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. : – -- – ’ –- –-