ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ತೀರ್ಪಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ…. ನವದೆಹಲಿ,ಸೆಪ್ಟಂಬರ್,30,2020(..):ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ 32 ಆರೋಪಿಗಳನ್ನ ಖುಲಾಸೆಗೊಳಿಸಿ ಇಂದು ಲಖನೌ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೋರ್ಟ್ ನ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಕೋರ್ಟ್ ತೀರ್ಪು ನಮ್ಮೆಲ್ಲರಿಗೂ ಖುಷಿ ತಂದಿದೆ. ಇದು ನಮ್ಮೆಲ್ಲರ ಪಾಲಿನ ಮಹತ್ವದ ದಿನ. ಹಲವು ಸಮಯದ ಬಳಿಕ ಸಿಹಿಸುದ್ದಿ ಸಿಕ್ಕಿದೆ ಎಂದು ನುಡಿದಿದ್ದಾರೆ. ಹಾಗೆಯೇ ಬಿಜೆಪಿ ಮುಖಂಡ ಮುರಳಿ ಮನೋಹರ್ ಜೋಷಿ ಮಾತನಾಡಿ, ನ್ಯಾಯಾಲಯದ ತೀರ್ಪು ಸ್ವಾಗತಾರ್ಹ. ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಖುಷಿ ತಂದಿದೆ. ದೇಶದ ನ್ಯಾಯ ವ್ಯವಸ್ಥೆಯ ಮೇಲೆ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. : - - - – – -.