ಬಸ್ ನಿಲ್ದಾಣದಲ್ಲಿ ನಿರ್ಗತಿಕ ವ್ಯಕ್ತಿ ಅನುಮಾನಸ್ಪದ ಸಾವು… ಮೈಸೂರು,ಸೆಪ್ಟಂಬರ್,30,2020(..):ನಿರ್ಗತಿಕ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮೆಟ್ರೊಪೋಲ್ ಸರ್ಕಲ್ ನ ಪಕ್ಕದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ನಿರ್ಗತಿಕ ಎನ್ನಲಾಗಿದ್ದು, ಬಸ್ ನಿಲ್ದಾಣದ ಬಳಿ ರಕ್ತದ ಮಡುವಿನಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ ಈ ಘಟನೆ ನಡೆದಿದ್ದು ಯಾರೋ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಆಯುಕ್ತೆ ಗೀತಾ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳಕ್ಕೆ ಡಾಗ್ ಸ್ವ್ಕಾಡ್, ಬೆರಳಚ್ಚು ತಜ್ಞರು ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : – – -