ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಮುಖಂಡ ಮುನಿರತ್ನ ಭೇಟಿ… ಮೈಸೂರು,ಸೆಪ್ಟಂಬರ್,29,2020(..):ರಾಜರಾಜೇಶ್ವರಿ ನಗರ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಬಿಜೆಪಿ ಮುಖಂಡ ಮುನಿರತ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ನವೆಂಬರ್ 3 ರಂದು ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಹಾಗೆಯೇ ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಉಪಚುನಾವಣೆಗೆ ಡೇಟ್ ಫಿಕ್ಸ್ ಆದ ಬೆನ್ನಲ್ಲೆ ಬೆನ್ನಲ್ಲೆ ಬಿಜೆಪಿ ಮುಖಂಡ ಮುನಿರತ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಮುನಿರತ್ನ, ಆರ್.ಆರ್.ನಗರ ಉಪಚುನಾವಣೆಯಲ್ಲಿ ಗೆದ್ದೆ, ಗೆಲ್ಲುತ್ತೇನೆ. ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಭ್ಯರ್ಥಿ ಆಯ್ಕೆ ಬಗ್ಗೆ ಗೊಂದಲವಿದ್ದರೇ ಪಕ್ಷದ ವರಿಷ್ಟರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಟಿಕೆಟ್ ನೀಡುವ ಬಗ್ಗೆ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾಳೆ ಮುಖ್ಯಮಂತ್ರಿ ಭೇಟಿಯಾಗುತ್ತೇನೆ ಎಂದು ಮುನಿರತ್ನ ಹೇಳಿದರು. : - - – -