ಆರ್ ಆರ್ ನಗರ ಮತ್ತು ಶಿರಾ ಬೈ ಎಲೆಕ್ಷನ್ ಗೆ ಡೇಟ್ ಫಿಕ್ಸ್… ಬೆಂಗಳೂರು,ಸೆಪ್ಟಂಬರ್,29,2020(..): ರಾಜ್ಯದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ನಿಗದಿಯಾಗಿದೆ. ಎರಡು ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆಯಲಿದ್ದು , ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ. ಅಕ್ಟೋಬರ್ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ಅಕ್ಟೋಬರ್ 19ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಬಿಹಾರ ವಿಧಾನಸಭೆ ಚುನಾವಣೆಯೊಂದಿಗೆ ಈ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ. ರಾಜರಾಜೇಶ್ವರಿ ನಗರ ಶಾಸಕರಾಗಿದ್ದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರಿಂದ ಸ್ಥಾನ ತೆರವಾಗಿತ್ತು. ಸತ್ಯನಾರಾಯಣ್ ಅವರ ನಿಧನದಿಂದ ಶಿರಾ ಕ್ಷೇತ್ರ ಸ್ಥಾನ ತೆರವಾಗಿತ್ತು. : - – - - .