ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ… ಮೈಸೂರು,ಸೆಪ್ಟಂಬರ್,29,2020(..): ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಮಂಜುನಾಥ್ ರೋಹಿಣಿ ಸಿಂಧೂರಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಮೈಸೂರು ನೂತನ ಡಿಸಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರ ಸ್ವೀಕಾರಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಕೆ… ಅಧಿಕಾರ ಸ್ವೀಕಾರಕ್ಕೂ ಮುನ್ನ ರೋಹಿಣಿ ಸಿಂಧೂರಿ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಪತಿ ಸುಧೀರ್ ರೆಡ್ಡಿ ಜತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ದೇವಸ್ಥಾನ ಆಡಳಿತ ಮಂಡಳಿ ಬರಮಾಡಿ ಕೊಂಡಿತು. ಈ ವೇಳೆ ಚಾಮುಂಡಿ ಬೆಟ್ಟ ಕಾರ್ಯ ನಿರ್ವಾಹಕ ಅಧಿಕಾರಿ ಎನ್ .ಎಸ್ ಯತಿರಾಜ್ ಸಂಪತ್ ಕುಮಾರನ್ .ವ್ಯವಸ್ಥಾಪಕ ಗೋವಿಂದ ರಾಜ್ ಹಾಗೂ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಉಪಸ್ಥಿತರಿದ್ದರು. : – – - -