ಪ್ರಧಾನಿಯವರು ಕೃಷಿ ಕ್ಷೇತ್ರವನ್ನು ಖಾಸಗೀಕರಣಮಾಡಲಿದ್ದಾರೆ : ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಬೆಂಗಳೂರು,ಸೆಪ್ಟೆಂಬರ್,28,2020(..): ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಬಿಜೆಪಿ ಅವರ ಮಾತು ಕೇಳಿ ರಾಜ್ಯದ ಜನರು 25 ಸಂಸದರ ಆಯ್ಕೆ ಮಾಡಿದ್ದಾರೆ. ಆದರೆ, ಇಂದು ಬಿಜೆಪಿ ಏನು ಮಾಡುತ್ತಿದೆ. ಎಪಿಎಂಸಿ ಬಂದ್ ಮಾಡಲು ನಿರ್ಧರಿಸಿದೆ. ಇದರಿಂದ ರೈತರಿಗೆ ಒಳ್ಳೆಯದಾಗುವುದೇ ಎಂದು ಪ್ರಶ್ನಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಮೂಲಕ ಖಾಸಗಿಯವರಿಗೆ ಲಾಭವನ್ನು ಒದಗಿಸುವ ಕಾರ್ಯವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. : ------ -