ಸಂಸದ ತೇಜಸ್ವಿ ಸೂರ್ಯ ರಾಜ್ಯದ ಜನರ ಕ್ಷಮೆಕೇಳಬೇಕು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರು,ಸೆಪ್ಟೆಂಬರ್,28,2020(..): ಸಂಸದ ತೇಜಸ್ವಿ ಸೂರ್ಯ ಗಾರ್ಡನ್ ಸಿಟಿ, ಐಟಿ ಸಿಟಿ ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ಟೆರರಿಸ್ಟ್ ಹಬ್ ಎನ್ನುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಆಕ್ರೋಶವ್ಯಕ್ತಪಡಿಸಿದರು. ಬೆಂಗಳೂರು ಟೆರರಿಸ್ಟ್ ಹಬ್ ಎಂಬ ತೇಜಸ್ವಿ ಸೂರ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ತೇಜಸ್ವಿ ಅಲ್ಲ ಅಮಾವಾಸ್ಯೆ ಸೂರ್ಯ, ರಾಜ್ಯದ ಜನರ ಕ್ಷಮೆ ಕೇಳಬೇಕು. ಯಡಿಯೂರಪ್ಪ ನಿಮ್ಮ ಸಂಸದ ರಾಜ್ಯಕ್ಕೆ ಅಪಮಾನ ಮಾಡಿದ್ದಾರೆ. ಇದನ್ನುನಾವು ಸಹಿಸುವುದಿಲ್ಲ. ಈ ಕುರಿತು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. : -------..