ನಾಳಿನ ರೈತ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರು,ಸೆಪ್ಟಂಬರ್,27,2020(..): ನಾಳೆ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ‘ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ರಾಜ್ಯ ಸರ್ಕಾರ ಹಲವು ತಪ್ಪುಗಳನ್ನ ಮಾಡಿದೆ. ಆ ತಪ್ಪುಗಳನ್ನ ಮುಂದಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು. ಇನ್ನು ನಾಳಿನ ರೈತರ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. : - - - - – -