ನಾಳೆ ಕರ್ನಾಟಕ ಬಂದ್: ಮೈಸೂರಿನಲ್ಲಿ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ… ಮೈಸೂರು,ಸೆಪ್ಟಂಬರ್,27,2020(..):ಎಪಿಎಂಸಿ ಮತ್ತು ಭೂ ಸುಧಾರಣಾ ತಿದ್ಧುಪಡಿ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿದ್ದು ಈ ನಡುವೆ ನಾಳೆ ಮೈಸೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ಸಂಚಾರ ಎಂದಿನಂತೆ ಇರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ಡಿಸಿ ನಾಗರಾಜ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕೆ.ಎಸ್.ಆರ್.ಟಿ.ಸಿ ಡಿಸಿ ನಾಗರಾಜ್, ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಎಂದಿನಂತೆ ಇರುತ್ತದೆ ಎಂದಿನಂತೆ ಸರ್ಕಾರಿ ಬಸ್ ಗಳು ರಸ್ತೆಗಿಳಿಯಲಿವೆ. ಎಲ್ಲಾ 300ಕ್ಕೂ ಹೆಚ್ಚು ರೂಟ್ ಗಳಲ್ಲಿ ಬಸ್ ಸಂಚಾರ ಇರಲಿದೆ. ಸಂದರ್ಭ ನೋಡಿಕೊಂಡು ಬಸ್ ಸಂಚಾರದ ಬಗ್ಗೆ ತೀರ್ಮಾನ ತೆಗೆಸುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ. ಮೈಸೂರು ನಗರ, ಗ್ರಾಮಂತರ ಸೇರಿದಂತೆ ಎಲ್ಲೆಡೆ ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಲಿವೆ. ಪ್ರತಿಭಟನೆ ತೀವ್ರತೆ ಹೆಚ್ಚಾದರೆ ಸಂಚಾರದಲ್ಲಿ ವ್ಯತ್ಯಾಸವಾಗಲಿದೆ ಎದು ನಾಗರಾಜು ತಿಳಿಸಿದ್ದಾರೆ. : - - - –