ನಾಳೆ ಬಂದ್ ಹಿನ್ನೆಲೆ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ- ಕುರುಬೂರು ಶಾಂತಕುಮಾರ್… ಬೆಂಗಳೂರು,ಸೆಪ್ಟಂಬರ್,27,2020(..):ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಈ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ ಎಂದು ರಾಜ್ಯ ಕಬ್ಬುಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ನಾಳಿನ ಬಂದ್ ಅಂಗವಾಗಿ ಬೆಂಗಳೂರಿನ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದೇವೆ. ಈ ರ್ಯಾಲಿಯಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಹಾಗೆಯೇ ನಾಳಿನ ರೈತರ ಹೋರಾಟಕ್ಕೆ ಕಾಂಗ್ರೆಸ್ ಸಹ ಬೆಂಬಲ ನೀಡಿದ್ದು ರೈತ ವಿರೋಧಿ ಕಾಯ್ದೆಗಳನ್ನ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. : - - - – –