ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ… ನವದೆಹಲಿ, ಸೆಪ್ಟೆಂಬರ್ 27,2020(..):ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್(82) ನಿಧನರಾಗಿದ್ದಾರೆ. ಭಾರತದ ರಕ್ಷಣಾ ಸಚಿವರಾಗಿ ಜಸ್ವಂತ್ ಸಿಂಗ್ ಕಾರ್ಯ ನಿರ್ವಹಣೆ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 1980 ರಿಂದ 2014ರ ತನಕ ಲೋಕಸಭೆ ಅಥವ ರಾಜ್ಯಸಭೆಗೆ ಆಯ್ಕೆಯಾಗಿದ್ಧ ಜಸ್ವಂತ್ ಸಿಂಗ್ ಅತಿ ಹೆಚ್ಚು ಕಾಲ ಕಾರ್ಯ ನಿರ್ವಹಣೆ ಮಾಡಿದ ಜನಪ್ರತಿನಿಧಿ ಎಂಬ ಹೆಗ್ಗಳಿಕೆ ಹೊಂದಿದ್ದರು. : - -