ಎಪಿಎಂಸಿ ಕಾಯ್ದೆ ರೈತರಿಗೆ ಮಾರಕ: ಸೆ.28ರ ಬಂದ್ ಗೆ ಸಹಕರಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ… ಬೆಂಗಳೂರು,ಸೆಪ್ಟಂಬರ್,24,2020(..)ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ಧುಪಡಿ ವಿರೋಧಿಸಿ ಸೆಪ್ಟಂಬರ್ 28ಕ್ಕೆ ಬಂದ್ ಗೆ ಕರೆ ನೀಡಲಾಗಿದ್ದು, ಈ ಬಂದ್ ಸಹಕಾರ ನೀಡುವಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಮನವಿ ಮಾಡಿದ್ದಾರೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಎಪಿಎಂಸಿ ಕಾಯ್ದೆ ರೈತರಿಗೆ ಮಾರಕ. ಸರ್ಕಾರದಿಂದ ರೈತರಮಾರುಕಟ್ಟೆಗೆ ಮಣ್ಣು ಹಾಕುವ ಕೆಲಸ ನಡೆಯುತ್ತಿದೆ. ಇದರಿಂದ ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲವಾಗಲಿದೆ. ರೈತರಿಗೆ ದಾರಿ ತಪ್ಪಿಸುವ ಕೆಲಸ ಬೇಡ ಎಂದು ಹರಿಹಾಯ್ದರು. ಇನ್ನು ಸೆಪ್ಟಂಬರ್ 28 ರಂದು ನಡೆಯುವ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು ಈ ನಡುವೆ ರೈತರ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡುವಂತೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದರು. : – – - –