ಕೊರೊನಾಗೆ ಕಾಂಗ್ರೆಸ್​ ಶಾಸಕ ನಿಧನ ಬೆಂಗಳೂರು,ಸೆಪ್ಟೆಂಬರ್,24,2020(..): ಕೊರೊನಾ ಗೆ ತುತ್ತಾಗಿದ್ದ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್​ ಶಾಸಕ ಬಿ. ನಾರಾಯಣರಾವ್​(65) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ.ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೆ.1ರಂದು ದಾಖಲಾಗಿಸಲಾಗಿತ್ತು. ಸುಮಾರು 25 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ವಾಸಕೋಶ ಸಮಸ್ಯೆ, ನ್ಯೂಮೋನಿಯಾ, ಅಧಿಕ ರಕ್ತದೊತ್ತಡ ಹಾಗೂ ಶುಗರ್ ನಿಂದಾಗಿ ಆರಂಭದಲ್ಲಿಯೇ ಅವರ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾದ ಎರಡನೇ ದಿನವೇ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿಯೂ, ಮಂಗಳವಾರ ರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. : --- , 1-9-2020 -19 3.55p., 65 . - . .