ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ- ವಿಪಕ್ಷ ನಾಯಕ ಸಿದ್ಧರಾಮಯ್ಯ…. ಬೆಂಗಳೂರು,ಸೆಪ್ಟಂಬರ್,24,2020(..):ರಾಜ್ಯ ಸರ್ಕಾರ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಬಿಎಸ್ ವೈ ಪುತ್ರ, ಮೊಮ್ಮಗ, ಹಾಗೂ ಅಳಿಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯಸರ್ಕಾರದ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದು ಕಿಡಿಕಾರಿದರು. ರಾಜ್ಯದ ಅಭಿವೃದ್ಧಿ ಕುಂಟಿತವಾಗಿದೆ. ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ. ಸರ್ಕಾರ ಜನವಿರೋಧಿ ಕಾಯ್ದೆಗಳನ್ನ ತರುತ್ತಿದೆ. ರಾಜ್ಯದ ಜನತೆಯ ವಿಶ್ವಾಸ ಕಳೆದುಕೊಂಡಿರುವ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತೇವೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ. : – - - - –- -.