ಕರ್ನಾಟಕ ಬರ ಪರಿಹಾರ: ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಭರವಸೆ. ನವದೆಹಲಿ, ಏಪ್ರಿಲ್​, 8,2024 (..):ಕರ್ನಾಟಕಕ್ಕೆ ಬರಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್​ ವಾದ ಮಂಡಿಸಿದರು. : , ,