ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ: ಸರ್ಕಾರದ ವಿರುದ್ಧ ಆಕ್ರೋಶ… ಬೆಂಗಳೂರು,ಸೆಪ್ಟೆಂಬರ್,22,2020(..): ಬಿಜೆಪಿ ಸರಕಾರವು ರೈತರು, ಕಾರ್ಮಿಕರು, ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಭೂ ಸುಧಾರಣಾ, ಎಪಿಎಂಸಿ, ವಿದ್ಯುತ್ ಕಾಯಿದೆ ತಿದ್ದುಪಡಿ ಖಂಡಿಸಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸರಕಾರ ರೈತರ ಪರವಾಗಿಲ್ಲ. ರೈತರ ಹೋರಾಟಕ್ಕೆ ಬೆಂಬಲ ಸಂಬಂಧಿಸಿದಂತೆ ಪಕ್ಷದ ಮುಖಂಡರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ; -----