ಬೈಕ್ -ಲಾರಿ ನಡುವೆ ಭೀಕರ ಅಪಘಾತ: ದ್ವಿಚಕ್ರವಾಹನ ಸವಾರ ಸಾವು… ಮೈಸೂರು, ಸೆ,22,2020(..):ಎದುರಿನಿಂದ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಬಳಿ ಈ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಎದುರಿನಿಂದ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಬೈಕ್ ಸವಾರನ ತಲೆಯ ಭಾಗ ತುಂಡಾಗಿದೆ. ಚಕ್ರಕ್ಕೆ ಸಿಲುಕಿದ ಬೈಕ್ ಸವಾರನನ್ನು ಲಾರಿ ಬಹಳಷ್ಟು ದೂರದ ತನಕ ಎಳೆದೊಯ್ದಿದ್ದು ಈ ವೇಳೆ ತಲೆ ಭಾಗ ತುಂಡಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – -- – -