ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಬರ್ಬರ ಹತ್ಯೆ ಮೈಸೂರು,ಸೆಪ್ಟೆಂಬರ್,21,2020(..): ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ( 67) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿವೇದಿತ ನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಮನೆಗೆ ನುಗ್ಗಿ ಮನಸೋ ಇಚ್ವೆ ಇರಿದು ಬರ್ಬರವಾಗಿ ಹಂತಕರು ಕೊಲೆ ಮಾಡಿದ್ದಾರೆ. ಪರಶಿವಮೂರ್ತಿ ಹಾಸನ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿಯಾಗಿದ್ದರು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಲೇವಾದೇವಿ , ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡಸಲಾಗುತ್ತಿದೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : ----