ಕೊರೊನಾ ಸಂಬಂಧಿಸಿದಂತೆ ಉದಾಸೀನ ಬೇಡ : ಸಿಎಂ ಬಿ.ಎಸ್.ವೈ ಮನವಿ ಬೆಂಗಳೂರು,ಸೆಪ್ಟೆಂಬರ್,21,2020(..): ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರು ಯಾವುದೇ ರೀತಿ ಉದಾಸೀನ ಮಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕೊರೊನಾ ಪ್ರಕರಣ ಹೆಚ್ಚಳ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸಂಬಂಧಿಸಿದಂತೆ ಜನಸಾಮಾನ್ಯರು ಮುಂಜಾಗ್ರತಾ ಕ್ರಮಗಳನ್ನು ಕಡೆಗಣಿಸಬಾರದು. ಈಗಾಗಲೇ ತಿಳಿಸಿರುವಂತೆ ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಬಳಸಬೇಕು ಎಂದು ಸಲಹೆ ನೀಡಿದ್ದಾರೆ. ಗ್ರಾಮೀಣ ಭಾಗದ ಜನರು ಕೂಡ ಕೊರೊನಾ ಸಂಬಂಧಿಸಿದಂತೆ ಎಚ್ಚರಿಕೆ ವಹಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. : ’---....-