ಭಾರಿ ಮಳೆ ಹಿನ್ನೆಲೆ, ಅಗತ್ಯ ಕ್ರಮಕೈಗೊಳ್ಳುವಂತೆ ಉಡುಪಿ ಡಿಸಿಗೆ ಸಿಎಂ ಸೂಚನೆ ಬೆಂಗಳೂರು,ಸೆಪ್ಟೆಂಬರ್,20,2020(..): ಉಡುಪಿ ಜಿಲ್ಲೆಯಲ್ಲಿ ಧಾರಕಾರ ಮಳೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅನೇಕ ಗ್ರಾಮಗಳು ಜಲಾವೃತವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಶೀಘ್ರವೇ ಅಗತ್ಯ ಕ್ರಮಕೈಗೊಳ್ಳುವಂತೆ ಫೋನ್ ಮಾಡಿ ತಿಳಿಸಿದ್ದಾರೆ. : ---- - --