ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಆರೋಪಿ ಬಂಧನ… ಕೊಡಗು,ಸೆಪ್ಟಂಬರ್,19,2020(..):ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿ ಸೈಯದ್ ಮೋಮಿನ್ (22) ಬಂಧಿತ ಆರೋಪಿ. ಎರಡು ತಲೆ ಹಾವು ಎಂದು ಕರೆಯಲಾಗುವ ರೆಡ್​ ಸ್ಯಾಂಡ್​ ಬೋವಾ ಹಾವನ್ನ ಆರೋಪಿ ಸೈಯದ್ ಮೋಮಿನ್ (22) ಮಾರಾಟ ಮಾಡಲು ಯತ್ನಿಸಿದ್ದನು. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಆನಂದಪುರದಲ್ಲಿ ಸೈಯದ್ ಮೋಮಿನ್. ಸಿಕ್ಕಿಬಿದ್ದಿದ್ದಾನೆ. ಸೈಯದ್ ಮೋಮಿನ್ ಆನಂದಪುರ ಬಸ್ ನಿಲ್ದಾಣದಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ್ದಾನೆ. ಸುಮಾರು ಒಂದು ಕೋಟಿಗೆ ಹಾವು ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಅನುಮಾನಗೊಂಡ ಅರಣ್ಯ ಸಂಚಾರಿ ದಳ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -- – - – -