ಬೈಕ್ ‌ನಲ್ಲಿ ಗಾಂಜಾ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ…. ಮೈಸೂರು,ಸೆಪ್ಟೆಂಬರ್,19,2020(..): ಬೈಕ್‌ನಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 300 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಹುಣಸೂರು ಹೊಸ ಪೆಂಜಳ್ಳಿ ಗೇಟ್ ಬಳಿ ಆರೋಪಿ ರವಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರೋಪಿ ರವಿ ನೀಡಿದ ಮಾಹಿತಿ ಆಧಾರದಲ್ಲಿ ವಿಜಯಗಿರಿ ಗ್ರಾಮದ ರಾಜೇಗೌಡ ಎಂಬಾತನ ಮನೆ ಮೇಲೆ ದಾಳಿ ಮಾಡುವ ಮೂಲಕ ರಾಜೇಗೌಡನ ಮನೆಯಲ್ಲಿದ್ದ 1 ಕೆಜಿ 900 ಗ್ರಾಂ ಗಾಂಜಾ ಸೊಪ್ಪು ವಶಕ್ಕೆ ಪಡೆಯಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. : ---300--