ಸಂಪುಟ ವಿಸ್ತರಣೆ ವಿಚಾರ: ಸಿಎಂ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಎಂಟಿಬಿ ನಾಗರಾಜ್… ಬೆಂಗಳೂರು,ಸೆಪ್ಟಂಬರ್,18,2020(..):ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರ ಜತೆ ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು ಈ ಕುರಿತು ಎಂಎಲ್ ಸಿ ಎಂಟಿಬಿ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರಚನೆ ಸಂಬಂಧ ಸಿಎಂ ಮತ್ತು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಎಂಟಿಬಿ ನಾಗರಾಜ್, ಇತ್ತೀಚೆಗೆ ನಾನು ಮತ್ತು ಆರ್ ಶಂಕರ್ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದವು. ಈ ವೇಳೆ ಈ ವೇಳೆ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಭರವಸೆ ನೀಡಿದ್ದರು. ಹೈಕಮಾಂಡ್ ಭೇಟಿಯಾಗಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಹೀಗಾಗಿ ನಾವು ನಿರೀಕ್ಷೆಯಲ್ಲಿದ್ದೇವೆ ಎಂದಿದ್ದಾರೆ. : - –-