ಸಂಪುಟ ವಿಸ್ತರಣೆ ವಿಚಾರ : ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ…? ಮೈಸೂರು,ಸೆಪ್ಟೆಂಬರ್,18,2020(..):ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಳದ್ದು, ಹೀಗಾಗಿ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ನಗರಕ್ಕೆ ಎಲ್ ಇ ಡಿ ಬೀದಿ ದೀಪ ಅಳವಡಿಸುವ ಸಂಬಂಧ ಬಹುವರ್ಷಗಳ ಬೇಡಿಕೆ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಂಪುಟದಲ್ಲಿ ಒಪ್ಪಿಗೆ ಪಡೆದು ಅನುಮೋದನೆ ಕೊಡಿಸಿದ್ದೇನೆ ಇನ್ನು ಮುಂದೂ ಸಹ ಮೈಸೂರು ಅಭಿವೃದ್ಧಿಗೆ ಬೇಕಾದ ಕೆಲಸ ಹಾಗೂ ಸಹಕಾರವನ್ನು ಖಂಡಿತವಾಗಿ ಕೊಡುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಶಾಸಕ ಎಲ್.ನಾಗೇಂದ್ರ , ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ನನ್ನ ಬಳಿ ಮೈಸೂರು ನಗರಕ್ಕೆ ಎಲ್ ಇ ಡಿ ಬೀದಿ ದೀಪ ಅಳವಡಿಸುವ ಸಂಬಂಧ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಈ ಬೇಡಿಕೆ ಈಡೇರಿಕೆಗೆ ಮುಂದಾಗಿರುವುದಾಗಿ ಹೇಳಿದ್ದಾರೆ. ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ 39 ಸಾವಿರ ಕೋಟಿ ರೂ. ಸಾಲ 15,300 ಕೋಟಿ ರೂ. ಕೊಡಲು ಈಗಾಗಲೇ ಚಾಲನೆ ಕೊಟ್ಟಿದ್ದೇವೆ. ಇದರಲ್ಲಿ ಈಗಾಗಲೇ 12 ಲಕ್ಷ ರೈತರಿಗೆ 7 ಸಾವಿರ ಕೋಟಿಗೂ ಅಧಿಕ ಸಾಲವನ್ನು ನೀಡಿದ್ದೇವೆ. ಇನ್ನು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ರೈತರು, ಅತಿ ಸಣ್ಣ ಉದ್ಯಮಿಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ನೀಡಲಾಗುತ್ತಿದ್ದು, 4 ವಿಭಾಗಳ ಮೂಲಕ ಸಾಲ ನೀಡಲಾಗುತ್ತದೆ. ಈಗಾಗಲೇ, ಬೆಂಗಳೂರು ವಿಭಾಗದಲ್ಲಿ ಮೊನ್ನೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚಾಲನೆ ನೀಡಲಾಗಿದ್ದು, ಉಳಿದಂತೆ ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರ‍ಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ಸಚಿವರ ಆಯ್ಕೆಯು ಮುಖ್ಯಮಂತ್ರಿಗಳ ನಿರ್ಧಾರ ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಳದ್ದು, ಹೀಗಾಗಿ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಕ್ರೀಟ್ ಚರಂಡಿ ರಸ್ತೆ, ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ 3.10 ಕೋಟಿ ರೂ. ವೆಚ್ಚದ ಕಾಂಕ್ರೀಟ್ ಚರಂಡಿ ರಸ್ತೆ ಪುನರ್ ನಿರ್ಮಾಣ ಹಾಗೂ ಡಾಂಬರೀಕರಣ ಕಾಮಗಾರಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ ಇತರರು ಉಪಸ್ಥಿತರಿದ್ದರು. : ---- ---?