ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆಂಗಳೂರು,ಸೆಪ್ಟೆಂಬರ್,18,2020(..): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗೆ ಜಾಮೀನು ನೀಡುವಂತೆ ಸಂಜನಾ ಗಲ್ರಾನಿ ಪರ ವಕೀಲರು ನಿನ್ನೆ ಅರ್ಜಿ ಸಲ್ಲಿಸಿದರು. ಇದಕ್ಕೆ ಸಂಬಂಧಿಸಿದಂತೆ ವಿಶೇಷ ಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿದ್ದು, ಸಂಜನಾ ಜಾಮೀನು ಅರ್ಜಿ ವಿಚಾರಣೆಯನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ನಾಳೆಗೆ ಮುಂದೂಡಿದೆ. ನಾಳೆ ಉಳಿದ ಆರೋಪಿಗಳ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ. : - ----