ಸಂಪುಟ ವಿಸ್ತರಣೆ ಅಥವಾ ಪುನರಚನೆ ಸಿಎಂ ಪರಮಾಧಿಕಾರ-ಶಾಸಕ ಎಂ.ಪಿ ರೇಣುಕಾಚಾರ್ಯ… ನವದೆಹಲಿ,ಸೆಪ್ಟಂಬರ್,18,2020(..):ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು ಪ್ರಧಾನಿ ಮೋದಿ ಮತ್ತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ. ಈ ನಡುವೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಸಹ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ. ಈ ವಿಚಾರದಲ್ಲಿ ಪಕ್ಷದ ಹೈಕಮಾಂಡ್, ಸಿಎಂ ತೀರ್ಮಾನವೇ ಅಂತಿಮ. ಸಚಿವ ಸ್ಥಾನ ನೀಡುವಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು. ಹಾಗೆಯೇ ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಕೈಬಿಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಊಹಾಪೂಹ ಎಂದು ನುಡಿದರು. : - - – - -