ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 50 ಲಕ್ಷ ಮೌಲ್ಯದ ಗಾಂಜಾ ವಶ: ಮೂವರು ಅಂದರ್… ಬೆಂಗಳೂರು,ಸೆಪ್ಟಂಬರ್,17,2020(..):ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 50 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಜಾಂಪಾಷಾ, ಮಸ್ತಾನ್, ಮೊಹಮ್ಮದ್ ಅಬ್ಬಾಸ್ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 50 ಲಕ್ಷ ಮೌಲ್ಯದ 90 ಕೆ.ಜಿ ಗಾಂಜಾ, ಕಾರು, ಒಂದು ತೂಕದ ಯಂತ್ರವನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ವಿಶಾಖಪಟ್ಟಣದಿಂದ ಗಾಂಜಾ ತಂದಿದ್ದರು ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಕಾಡಗೋಡಿಯಲ್ಲಿದ್ದ ಆರೋಪಿ ಅಜಾಂಪಾಷಾ ಅಪಾರ್ಟ್ ಮೆಂಟ್ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು ಈ ಕುರಿತು ಕಾಡಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -- – 50 – -