ನಟ ದಿಗಂತ್ – ಐಂದ್ರಿತಾ ರೈ ದಂಪತಿಗೆ ಸಿಸಿಬಿಯಿಂದ ನೋಟೀಸ್… ಬೆಂಗಳೂರು,ಸೆಪ್ಟಂಬರ್,15,2020(..):ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈ ಅವರಿಗೂ ಸಿಸಿಬಿ ನೋಟೀಸ್ ನೀಡಿದೆ. ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿರುವ ಸಿಬಿಬಿ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಸಿಸಿಬಿ ಸೂಚನೆ ನೀಡಿದೆ. ಡ್ರಗ್ಸ್ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಅವರು ನ್ಯಾಯಾಂಗ ಬಂಧನದಲ್ಲಿದ್ದು ನಟಿ ಸಂಜನಾ ಅವರನ್ನ ಕೋರ್ಟ್ ಎರಡು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಈ ಮೂಲಕ ನಟಿ ರಾಗಿಣಿ ನಟಿ ಸಂಜನಾ ಡ್ರಗ್ಸ್ ದಂಧೆಯಲ್ಲಿ ಸಿಲುಕ್ಕಿದ್ದು ಇದೀಗ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ. : - –- – -