ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ… ಬೆಂಗಳೂರು,ಸೆಪ್ಟಂಬರ್,14,2020(..):ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 1ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ನಟಿ ರಾಗಿಣಿ ಸೇರಿ 6 ಆರೋಪಿಗಳ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ವಿಡಿಯೋ ಕಾನ್ಫರೇನ್ಸ್‌ ಮೂಲಕ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು. ನಟಿ ಸಂಜನಾ ಹೊರತುಪಡಿಸಿ ನಟಿ ರಾಗಿಣಿ ಉಳಿದ ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸೆಪ್ಟಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟಂಬರ್ 16ಕ್ಕೆ ಮುಂದೂಡಿಕೆಯಾಗಿದ್ದು ಅಂದು ನಟಿ ರಾಗಿಣಿ ಅವರಿಗೆ ಜಾಮೀನು ಕುರಿತು ನಿರ್ಧಾರವಾಗಲಿದೆ. : 14-- - – .