ಮೇಕೆದಾಟು ಯೋಜನೆ : ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಗೆ ನಿಯೋಗ – ಸಚಿವ ರಮೇಶ್ ಜಾರಕಿಹೊಳಿ‌ ಭರವಸೆ.. ರಾಮನಗರ,ಸೆಪ್ಟಂಬರ್,14,2020(..):ರಾಮನಗರ ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವ ರಮೇಶ್ ಜಾರಕಿಹೊಳಿ, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದ್ದು, ಪರಿಸರ ಮತ್ತು ಅರಣ್ಯ ಇಲಾಖೆಗಳ ಅನುಮತಿಗಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು. ಮೇಕೆದಾಟು ಅಣೆಕಟ್ಟನ್ನು 9000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ವಾಸ್ತವ ಅಂಶಗಳ ಮನವರಿಕೆಗಾಗಿ ಮತ್ತು ತ್ವರಿತ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ‌ ಒತ್ತಡ ಹೇರುವ ದೃಷ್ಟಿಯಿಂದ ದೆಹಲಿಗೆ ತೆರಳುವುದಾಗಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸಚಿವ ರಮೇಶ್ ಜಾರಕಿಹೊಳಿ‌ ಅವರು ಪರಿವೀಕ್ಷಣೆ ನಡೆಸಿ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಎಂ ಎಲ್ ಸಿ ಸಿಪಿ ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು. : - – – – - -