ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ… ಬೆಂಗಳೂರು,ಸೆಪ್ಟಂಬರ್,14,2020(..):ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 16ಕ್ಕೆ ಕೋರ್ಟ್ ಮುಂದೂಡಿದೆ. ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜತೆಗೆ, ಇತರ ಆರೋಪಿಗಳಾದ ಶಿವಪ್ರಕಾಶ್,ರಾಹುಲ್ ,ವೈಭವ್ ಜೈನ್ ,ವಿನಯ್ ಕುಮಾರ್ ಅವರು ಸಹ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿ ವಿಚಾರಣೆಯನ್ನು ಎನ್ ಡಿಪಿಎಸ್ ನ್ಯಾಯಾಲಯ ಸೆಪ್ಟಂಬರ್ 16ಕ್ಕೆ ಮುಂದೂಡಿದೆ. ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಸಿಸಿಬಿ ಪರ ವಕೀಲರುಮ ಆರೋಪಿಗಳಿಗೆ ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಮನವಿ ಮಾಡಿಕೊಂಡರು. ಆರೋಪಿಗಳು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ತಮಗೆ ಅವಕಾಶ ನೀಡಬೇಕು ಎಂದು ಅವರು ಮನವಿ ಸಲ್ಲಿಸಿದರು. ವಿಚಾರಣೆಯನ್ನು 16ಕ್ಕೆ ಮುಂದೂಡಿದ ಕೋರ್ಟ್ ಅಂದು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. : - -’- --