ಅರಕೇಶ್ವರ ದೇಗುಲದಲ್ಲಿ ಮೂವರ ಹತ್ಯೆ ಪ್ರಕರಣ: ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು ಮಂಡ್ಯ,ಸೆಪ್ಟಂಬರ್,14,2020(..):ಮಂಡ್ಯದಲ್ಲಿ ಅರಕೇಶ್ವರ ದೇಗುಲದ ಅರ್ಚಕರು ಸೇರಿ ಮೂವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಮದ್ದೂರು ತಾಲೂಕು ಸಾದೊಳಲು ಗೇಟ್ ಬಳಿ ಆರೋಪಿಗಳಿಗೆ ಪೊಲೀಸರು ಗುಂಡು ಹಾರಿಸಿ ಆರೋಪಿಗಳನ್ನ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸಾದೊಳಲು ಗೇಟ್ ಬಳಿ ಇದ್ದ ಮೂವರು ಆರೋಪಿಗಳನ್ನ ಪೊಲೀಸರು ಶರಣಾಗಲು ಸೂಚನೆ ನೀಡಿದರು. ಈ ವೇಳೆ ಪೊಲೀಸರ ಮೇಲೆ ಚಾಕು ಮತ್ತು ಕಲ್ಲಿನಿಂದ ಹಲ್ಲೆ ಮಾಡಿ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದರು ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಘಟನೆ ವೇಳೆ ಎಸ್ ಐ ಹಾಗೂ ಇಬ್ಬರು ಕಾನ್ಸ್ ಟೇಬಲ್ ಗಳಿಗೆ ಗಾಯಗಳಾಗಿದ್ದು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. : –- -- – -