ರಾಜಕೀಯವಾಗಿ ನನ್ನನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ : ಶಾಸಕ ಜಮೀರ್ ಅಹ್ಮದ್ ಖಾನ್ ಬೆಂಗಳೂರು, ಸೆಪ್ಟೆಂಬರ್,14,2020(..): ನನ್ನ ರಾಜಕೀಯವಾಗಿ ಮುಗಿಸುವುದಕ್ಕೆ ಮುಂದಾಗಿದ್ದಾರೆ. ನನ್ನ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಬೇಸರವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಎದುರಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಪೊಲೀಸರು ತುಂಬಾ ಸ್ಟ್ರಾಂಗ್ ಇದ್ದಾರೆ. ತನಿಖೆ ನಡೆಯುತ್ತಿದೆ. ಹೀಗಾಗಿ, ನಾನು ಏನು ಹೇಳುವುದಿಲ್ಲ. ನಾನು ಏನು ತಪ್ಪು ಮಾಡಿಲ್ಲ. ಸಂಜನಾ ಏನಾದ್ರೂ ದಾಖಲೆ ಕೊಟ್ಟಿದ್ದಾರ? ಎಂದು ಪ್ರಶ್ನಿಸಿರುವ ಅವರು, ರಾಜಕೀಯವಾಗಿ ನನ್ನ ಮುಗಿಸುವುದಕ್ಕೆ ಮುಂದಾಗಿದ್ದು, ನನ್ನ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ; ----