ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ…. ಕೊಡಗು,ಸೆಪ್ಟಂಬರ್,14,2020(..):ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡು ಬಳಿ ಈ ಘಟನೆ ನಡೆದಿದೆ. ಸೋಮವಾರಪೇಟೆ ಯಿಂದ ಕುಶಾಲನಗರಕ್ಕೆ ಶಿಫ್ಟ್ ಡಿಸೈನರ್ ಕಾರಿನಲ್ಲಿ ಕೃಷಿ ಅಧಿಕಾರಿ ಪುರಂದ್ ಎಂಬುವವರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಈ ಕಾರು ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಎರಡು ಕಾರು ಮಗುಚಿ ಬಿದ್ದಿವೆ. ತಡರಾತ್ರಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. : -- - .