ಆಟೋ ಓಡಿಸುತ್ತಿದ್ದ ಜಿಲ್ಲಾ ಆರ್ ಸಿಹೆಚ್ ಅಧಿಕಾರಿಗೆ ಹುದ್ದೆ ನಿಯೋಜನೆ- ಆರೋಗ್ಯ ಸಚಿವ ಶ್ರೀರಾಮುಲು ಬೆಂಗಳೂರು,ಸೆಪ್ಟಂಬರ್,10,2020(..):ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದ ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರನ್ನ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ. ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಐಎಎಸ್ ಅಧಿಕಾರಿಗಳ ನಡೆಯಿಂದ ವೈದ್ಯಾಧಿಕಾರಿ ಎಂ ಎಚ್ ರವೀಂದ್ರನಾಥ್ ಅವರು ಬೇಸತ್ತಿದ್ದರು ಎನ್ನಲಾಗಿದೆ. : – - - – -.