ಬೆಂಗಳೂರಿನಲ್ಲಿ ‘ಕೈ’ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ಬೆಂಗಳೂರು, ಸೆಪ್ಟಂಬರ್,21,2024 (..):ಮೀಸಲಾತಿ ಬಗ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಬಿಜೆಪಿ ದೂರು ನೀಡಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್ ಸೇರಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ. ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ವಿರುದ್ದ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. : , , ,