ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ ಬೆಂಗಳೂರು,ಸೆಪ್ಟಂಬರ್,21,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಪರ ವಕೀಲ ಸುನೀಲ್ ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯದಿಂದಾಗಿ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಮಾಡಲಾಗಿದೆ. ಪ್ರಕರಣ ಸಂಬಂಧ ಇತ್ತೀಚೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಕೆ ಮಾಡಿದ್ದರು. ಇದೀಗ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದೇ ವಿಚಾರಣೆ ನಡೆಯುವ ಸಾಧ್ಯತೆ ಇದೆ. : , , ,