ವಿದ್ಯುತ್ ತಂತಿ ತಗುಲಿ 4 ವರ್ಷದ ಬಾಲಕ ಸಾವು… ಹಾಸನ, ಸೆಪ್ಟಂಬರ್,9,2020(..):ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದೆ. 4 ವರ್ಷದ ಬಾಲಕ ಧನುಷ್ ಮೃತಪಟ್ಟ ಬಾಲಕ. ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ. ಘಟನೆಗೆ ಕೆಪಿಟಿಸಿಎಲ್ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಧನುಷ್ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. : 4-- - – -