ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣ: ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ… ಬೆಂಗಳೂರು,ಸೆಪ್ಟಂಬರ್,8,2020(..):ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ‌ ಅಧಿಕಾರಿಗಳು ಇಂದು ಬೆಳಿಗ್ಗೆ ನಟಿ ಸಂಜನಾ ಗಲ್ರಾನಿ ಪ್ಲ್ಯಾಟ್ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ನಟಿ ಸಂಜನಾ ಆಪ್ತ ರಾಹುಲ್ ನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದು, ಈ ನಡುವೆ ಸಚ್೯ ವಾರಂಟ್ ಪಡೆದ ಸಿಸಿಬಿ‌ ಅಧಿಕಾರಿಗಳು ಇಂದು ಮುಂಜಾನೆ ಸಂಜನಾ ಮನೆ ಮೇಳೆ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ. ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿದೆ. ನಟಿ ಸಂಜನಾಗೆ ಸೇರಿದದ ಮೂವರು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಡ್ರಗ್ಸ್ ದಂಧೆಯಲ್ಲಿ ನಟಿ ಸಂಜನಾ ಹೆಸರು ಕೇಳಿಬರುತ್ತಿದ್ದು, ಈಗಾಗಲೇ ಆಪ್ತ ರಾಹುಲ್​ ಸಿಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇನ್ನು ಬಂಧಿತ ಪೆಡ್ಲೆರ್ ವಿರೇನ್ ಖನ್ನಾ ಮನೆ ಮೇಲೂ ಸಿಸಿಬಿ ದಾಳಿ ನಡೆಸಿದೆ. : - - - –